Sports

ದ.ಆಫ್ರಿಕಾ ವಿರುದ್ಧದ ಏಕದಿನ ಪಂದ್ಯಗಳಿಗೆ ವಿರಾಟ್‌ ಅಲಭ್ಯ

ಮುಂಬೈ : ಭಾರತ ತಂಡವು ದ.ಆಫ್ರಿಕಾದಲ್ಲಿ ಟೆಸ್ಟ್‌ ಮತ್ತು ಏಕದಿನ ಪಂದ್ಯಗಳ ಸರಣಿ ಆಡಬೇಕಿದೆ. ಈಗ ಭಾರತ ತಂಡಕ್ಕೆ ಮತ್ತೊಂದು ಶಾಕ್‌ ಎದುರಾಗಿದೆ. ವಿರಾಟ್‌ ಕೊಹ್ಲಿ ಅವರು ಏಕದಿನ ಪಂದ್ಯಗಳಲ್ಲಿ ಪಾಲ್ಗೊಳ್ಳುವುದಿಲ್ಲ ಎಂಬ ಮಾಹಿತಿ ಕೇಳಿ ಬರ್ತಿದೆ.

ಕಾಸಗಿ ಸುದ್ದಿ ಸಂಸ್ಥೆ ಮಾಡಿರುವ ವರದಿ ಪ್ರಕಾರ ಬಿಸಿಸಿಐಗೆ ಕೊಹ್ಲಿ ಏಕದಿನ ಕ್ರಿಕೆಟ್‌ಗೆ ನಾನು ಅಲಭ್ಯ ಎಂದು ಈಗಾಗಲೇ ತಿಳಿಸಿದ್ದಾರೆ. ಆದರೆ ಇದರ ಬಗ್ಗೆ ಬಿಸಿಸಿಐ ಇನ್ನು ಯಾವುದೇ ರೀತಿಯ ಅಧಿಕೃತ ಮಾಹಿತಿ ನೀಡಿಲ್ಲ.

ಮಗಳ ಮೊದಲ ವರ್ಷದ ಹುಟ್ಟು ಹಬ್ಬವಿರುವ ಕಾರಣಕ್ಕೆ ಅವರು ಏಕದಿನ ಪಂದ್ಯಗಳಿಂದ ಹಿಂದೆ ಸರಿದಿದ್ದಾರೆ.

 

Share Post