Sports

ವಿಶ್ವಕಪ್‌ ಸೆಮಿಫೈನಲ್‌; ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ..?

ಮುಂಬೈ; ಇಂದು ವಿಶ್ವಕಪ್‌ ಕ್ರಿಕೆಟ್‌ನ ಮೊದಲ ಸೆಮಿಫೈನಲ್‌ ನಡೆಯುತ್ತಿದೆ. ಟೀಂ ಇಂಡಿಯಾ ನ್ಯೂಜಿಲೆಂಡ್‌ ವಿರುದ್ಧ ಸೆಣಸಾಡಲಿದೆ. ಲೀಗ್‌ನ ಎಲ್ಲಾ ಪಂದ್ಯಗಳನ್ನೂ ಗೆದ್ದಿರುವ ಟೀಂ ಇಂಡಿಯಾ ಸೆಮಿಫೈನಲ್‌ನಲ್ಲೂ ಗೆಲ್ಲುವ ಉತ್ಸಾಹದಲ್ಲಿದೆ. ಈ ಮೂಲಕ ನ್ಯೂಜಿಲೆಂಡ್‌ ವಿರುದ್ಧ ಸೇಡು ತೀರಿಸಿಕೊಳ್ಳಲು ಹಣಿಯಾಗಿದೆ.

2019ರ ವಿಶ್ವಕಪ್ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಸೋಮನುಭವಿಸಿತ್ತು. ಈ ಬಾರಿ  ಅದೇ ತಂಡದ ವಿರುದ್ದ ಸೆಮಿಫೈನಲ್ ಆಡುತ್ತಿದ್ದು, ಈ ಬಾರಿ ಗೆಲುವಿನ ಮೂಲಕ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಟೀಂ ಇಂಡಿಯಾ ಇದೆ. ಟೀಂ ಇಂಡಿಯಾ ಗೆಲುವಿಗಾಗಿ ಇಡೀ ದೇಶ ಕಾಯುತ್ತಿವೆ.

2019ರ ವಿಶ್ವಕಪ್ ಸೆಮಿಫೈನಲ್ ಪಂದ್ಯ ಭಾರತೀಯರು ಇಂದಿಗೂ ಆ ಸೋಲಿನ ನೋವು ಮರೆತಿಲ್ಲ. 2019ರಲ್ಲಿ ಇಂಗ್ಲೆಂಡ್ ನೆಲದಲ್ಲಿ ಟೀಮ್ ಇಂಡಿಯಾವನ್ನು ಮಣಿಸಿದ್ದ ನ್ಯೂಜಿಲೆಂಡ್, ಕೋಟ್ಯಂತರ ಅಭಿಮಾನಿಗಳ ಕನಸು ನುಚ್ಚುನೂರು ಮಾಡಿತ್ತು.

Share Post