ಆನ್‌ಲೈನ್ ಗೇಮಿಂಗ್‌ಗೆ ಹೈಕೋರ್ಟ್‌ನಿಂದ ಗ್ರೀನ್ ಸಿಗ್ನಲ್
ಬೆಂಗಳೂರು : ಆನ್‌ಲೈನ್ ಜೂಜು ನಿಷೇಧಿಸಿ ಕರ್ನಾಟಕ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಆಲ್ ಇಂಡಿಯಾ ಗೇಮಿಂಗ್ ಫೆಡರೇಷನ್ ಆಫ್ ಇಂಡಿಯಾ ಮತ್ತು ಗ್ಯಾಲಕ್ಟಸ್ ಫನ್‌ವೇರ್ ಟೆಕ್ನಾಲಜಿ ಮತ್ತು ಇನ್ನಿತರ ಹಲವು ಕಂಪನಿಗಳು ಈ ಆದೇಶವನ್ನು ವಿರೋಧಿಸಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.
ರಿಟ್ ಅರ್ಜಿಯನ್ನು ಪರಿಶೀಲಿಸಿದ ಮುಖ್ಯ ನ್ಯಾಯಮುರ್ತಿ ಋತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅರ್ಜಿಯನ್ನು ಮಾನ್ಯ ಮಾಡಿದೆ.
ಆನ್ ಲೈನ್ ಬೆಟ್ಟಿಂಗ್ ಸಂಬಂಧಿಸಿದಂತೆ ಸರ್ಕಾರದ ಆದೇಶ ಸಂವಿಧಾನಬದ್ಧವಾಗಿರಲಿಲ್ಲ. ಆನ್‌ಲೈನ್ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ. ಸಂವಿಧಾನಬದ್ಧ ಶಾಸನ ರೂಪಿಸಲು ಸರ್ಕಾರಕ್ಕೆ ಸ್ವಾತಂತ್ರವಿದೆ ಎಂದು ಹೈ ಕೋರ್ಟ್ ತಿಳಿಸಿದೆ.