ಇಸ್ರೋ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ಎಸ್.ಸೋಮನಾಥ್ ನೇಮಕ
ಬೆಂಗಳೂರು: ಹಿರಿಯ ವಿಜ್ಞಾನಿ ಎಸ್.ಸೋಮನಾಥ್ ಅವರು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ನೂತನ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಚಂದ್ರಯಾನ-2, GSAT-9 ಯೋಜನೆ ಸೇರಿದಂತೆ ಅನೇಕ ಯೋಜನೆಗಳಲ್ಲಿ ಯಶಸ್ವಿಯಾಗಿ ಸೇವೆ ಸಲ್ಲಿಸಿರುವ ಸೋಮನಾಥ್ ಅವರನ್ನು ರಾಕೆಟ್ ವಿಜ್ಞಾನಿ ಎಂದು ಕರೆಯಲಾಗುತ್ತದೆ. ೨೦೧೮ರಿಂದ ವಿಕ್ರಮ್ ಸಾರಾಭಾಯಿ ಬಾಹ್ಯಾಕಾಶ ಕೇಂದ್ರದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಸೋಮನಾಥ್ ಈಗ ಇಸ್ರೋ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.
ಸೋಮನಾಥ್ ಅವರು ಕೊಲ್ಲಂನಲ್ಲಿ ಎಂಜಿನಿಯರಿಂಗ್ ಪದವಿ ಮಾಡಿದ್ದಾರೆ. ನಂತರ ಬೆಂಗಳೂರಿನಲ್ಲಿ ಇಂಡಿಯನ್ ಇನ್ಸ್‌ಟಿಟ್ಯೂಟ್ ಆಫ್ ಸೈನ್ಸ್‌ನಲ್ಲಿ ಏರೋಸ್ಪೇಸ್ ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹಲವು ಪ್ರಾಜೆಕ್ಟ್‌ಗಳಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸಿರುವ ಸೋಮನಾಥ್, ಇಸ್ರೋ ಅಧ್ಯಕ್ಷರಾಗಿದ್ದಾರೆ.