DistrictsUncategorized

ರಾಮನಗರ ಪ್ರಾಧಿಕಾರದಲ್ಲಿ 16ಕೋಟಿ ಲೂಟಿ: ಹೆಚ್‌ಡಿಕೆ ಆಕ್ರೋಶ

ರಾಮನಗರ: 2013ರಲ್ಲಿ ರಾಮನಗರದ ಪ್ರಾಧಿಕಾರದಿಂದ 16ಕೋಟಿ ಲೂಟಿಯಾಗಿದೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಲೂಟಿ ಮಾಡಿದವರಿಗೆ ದೊಡ್ಡ ದೊಡ್ಡ ಸ್ಥಾನ ಕೊಟ್ಟಿದ್ದಾರೆ ಅಂತಹ ಲೂಟಿ ಕೋರರಿಗೆ ರಾಜ್ಯ ಸರ್ಕಾರದಲ್ಲಿರುವವರೇ ರಕ್ಷಣೆ ಕೊಡ್ತಿದಾರೆ. ಲೂಟಿ ಮಾಡಿರುವ 16ಕೋಟಿ ಹಣ ಏನಾಗಿದೆ ಎಂದು ಯಾರಿಗೂ ಗೊತ್ತಿಲ್ಲ. ಈ ಬಗ್ಗೆ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇನೆ ಎಂದು ಕೇತಗಾನಹಳ್ಳಿಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಇನ್ನೂ ಮುಂದುವರೆದು ಮಾತನಾಡಿದ ಅವರು, ಇಡೀ ದೇಶದಲ್ಲಿ ರಾಷ್ಟ್ರೀಯ ಪಕ್ಷಗಳನ್ನು ಜನರು ತಿರಸ್ಕರಿಸುತ್ತಿದ್ದಾರೆ. ಪ್ರಾದೇಶಿಕ ಪಕ್ಷಗಳಿಗೆ ಹೆಚ್ಚೆಚ್ಚು ಮಣೆ ಹಾಕುತ್ತಿದ್ದಾರೆ. ಕರ್ನಾಟಕದ ಮಟ್ಟಿಗೆ ಹೇಳುವುದಾದರೆ ಕಳೆದ 75 ವರ್ಷಗಳಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ನೀರಾವರಿ ಸೇರಿದಂತೆ ವಿವಿಧ ವಲಯಗಳಲ್ಲಿ ಭಾರೀ ಅನ್ಯಾಯ ಮಾಡಿವೆ. ಆದರೆ, ಅಧಿಕಾರದಲ್ಲಿದ್ದ ಅಲ್ಪಸ್ವಲ್ಪ ಅವಧಿಯಲ್ಲೇ ಜೆಡಿಎಸ್ ಪಕ್ಷವು ಜನರ ಆಶೋತ್ತರಗಳನ್ನು ಈಡೇರಿಸಿದೆ. ಈ ಬಗ್ಗೆ ಸರಕಾರದ ಬಳಿ ನೈಜ ದಾಖಲೆಗಳೇ ಇವೆ. ಹಾಗೆಯೇ, ಭಾಷೆಗೆ ಸಂಬಂಧಿಸಿದಂತೆ ಕನ್ನಡವು ದೆಹಲಿಯಿಂದ ನಾನಾ ರೀತಿಯ ಕಿರುಕುಳ ಅನುಭವಿಸುತ್ತಿದೆ. ಇದನ್ನು ತಪ್ಪಿಸಬೇಕಿದೆ ಎಂದರು.

ಪ್ರಸ್ತು ಆಡಳಿತ ಪಕ್ಷ ಹಾದಿ ತಪ್ಪಿದೆ. ಆಡಳಿತ ಪಕ್ಷದ ಶಾಸಕರೇ ಸರ್ಕಾರದ ಬಗ್ಗೆ ಹಾದಿಬೀದಿಯಲ್ಲಿ ಲಘುವಾಗಿ ಮಾತನಾಡುವುದು, ಮಂತ್ರಿಗಳ ಬಗ್ಗೆ ಹೇಳಿಕೆಗಳನ್ನು ನೀಡುವುದು ಉತ್ತಮ ನಡವಳಿಕೆ ಅಲ್ಲ ಎಂದಿದ್ದಾರೆ. ಸಮಸ್ಯೆಗಳಿದ್ದರೆ ಪಕ್ಷದ ಚೌಕಟ್ಟಿನೊಳಗೆ ಬಗೆಹರಿಸಿಕೊಳ್ಳಬೇಕು. ಆದು ಬಿಟ್ಟು ಶಿಸ್ತಿನ ಪಕ್ಷ ಎಂದು ಟ್ಯಾಗ್ʼಲೈನ್ ಹಾಕಿಕೊಂಡ ಪಕ್ಷದಲ್ಲಿ ದಿನನಿತ್ಯ ಶಾಸಕರು ಸರಕಾರ, ಮಂತ್ರಿಗಳ ಬಗ್ಗೆ ಮಾತನಾಡುವುದು ಉತ್ತಮ ಬೆಳವಣಿಗೆ ಅಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Share Post