Uncategorized

ಅಮೆರಿಕದಲ್ಲಿ ಭೀಕರ ಕಾರು ಅಪಘಾತ; ಮೂವರು ಭಾರತೀಯ ವಿದ್ಯಾರ್ಥಿಗಳ ದುರ್ಮರಣ!

ವಾಷಿಂಗ್ಟನ್‌; ಅಮೆರಿಕದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ.. ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಈ ದುರ್ಘಟನೆ ನಡೆದಿದೆ.. ಭಾರತೀಯ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಈ ದುರಂತ ನಡೆದಿದೆ..

ಭಾರತೀಯ ಮೂಲದ ವಿದ್ಯಾರ್ಥಿಗಳಾದ ಆರ್ಯನ್ ಜೋಶಿ, ಶ್ರೀಯಾ ಅವಸರಲಾ, ಅನ್ವಿ ಶರ್ಮಾ ಮೃತ ದುರ್ದೈವಿಗಳಾಗಿದ್ದಾರೆ.. ಕಾರು ವೇಗವಾಗಿ ಚಲಾಯಿಸುತ್ತಿದ್ದರಿಂದ ಕಾರು ನಿಯಂತ್ರಣ ತಪ್ಪಿದೆ.. ಅದು ವೇಗವಾಗಿ ಮರಕ್ಕೆ ಡಿಕ್ಕಿ ಹೊಡೆದಿದೆ.. ಮೃತ ಮೂವರು ವಿದ್ಯಾರ್ಥಿಗಳೂ ಆಲ್ಫರೆಟ್ಟಾ ಹೈಸ್ಕೂಲ್ ಮತ್ತು ಜಾರ್ಜಿಯಾ ಯೂನಿವರ್ಸಿಟಿಯಲ್ಲಿ ಓದುತ್ತಿದ್ದರು ಎಂದು ತಿಳಿದುಬಂದಿದೆ..

ಕಾರಿನಲ್ಲಿದ್ದ ಇನ್ನಿಬ್ಬರಿಗೆ ಗಂಭೀರವಾದ ಗಾಯಗಳಾಗಿವೆ.. ಗಾಯಗೊಂಡ ರಿಥ್ವಾಕ್ ಸೋಮೆಪಲ್ಲಿ ಮತ್ತು ಮೊಹಮ್ಮದ್ ಲಿಯಾಕತ್ ಗೆ ಚಿಕಿತ್ಸೆ ನೀಡಲಾಗುತ್ತಿದೆ.

 

Share Post