DistrictsUncategorized

ಧಾರವಾಡ ಭೀಕರ ಅಪಘಾತ ಪ್ರಕರಣ; ಮೃತರ ಸಂಖ್ಯೆ 9ಕ್ಕೆ ಏರಿಕೆ

ಧಾರವಾಡ: ನಿನ್ನೆ ಮಧ್ಯರಾತ್ರಿ ಧಾರವಾಡ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಒಂಭತ್ತಕ್ಕೇರಿದೆ. ಇನ್ನು ನಿಗದಿ ಗ್ರಾಮಕ್ಕೆ ಕಲಘಟಗಿ ಕ್ಷೇತ್ರದ ಶಾಸಕ ಸಿ.ಎಂ. ನಿಂಬಣ್ಣವರ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

 ಅನಂತರ ಮಾತನಾಡಿದ ನಿಂಬಣ್ಣ , ಅಪಘಾತದಲ್ಲಿ 9 ಜನರು ಮೃತಪಟ್ಟಿದ್ದಾರೆ. ಇದು ತುಂಬಾ ದುಃಖದ ಸಂಗತಿ. ಈ ಭಾಗದ ಜನರಿಗೆ ಆಘಾತ ತಂದಿದೆ. ಅಪಘಾತಕ್ಕೆ ಕಾರಣ ಏನು ಎಂಬುದನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸುತ್ತೇವೆ. ಮೃತರ ಸಂಬಂಧಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ‌ ಎಂದರು.

ಸುಮಾರು 21 ಮಂದಿ ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಏಳು ಜನರು ಮೃತಪಟ್ಟಿದ್ದರು. ಬಳಿಕ ಆಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಸದ್ಯ ಸಾವಿನ ಸಂಖ್ಯೆ 9ಕ್ಕೆ ಏರಿದೆ.

Share Post