Amit Sha and Hdk; ನಾಳೆ ಕುಮಾರಸ್ವಾಮಿ ನಿವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ..?
ಬೆಂಗಳೂರು; ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿವೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಯವರು ಹಲವು ಬಾರಿ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಇದೀಗ, ಇವರಿಬ್ಬರ ನಡುವಿನ ಸಂಬಂಧ ಮತ್ತಷ್ಟು ಗಟ್ಟಿಗೊಳ್ಳೋ ಸಾಧ್ಯತೆ ಇದೆ. ಕುಮಾರಸ್ವಾಮಿಯವರು ಅಮಿತ್ ಶಾ ಅವರನ್ನು ತಮ್ಮ ಮನೆಗೆ ಆಹ್ವಾನಿಸಿದ್ದಾರೆ. ನಾಳೆ ಅಮಿತ್ ಶಾ ಅವರು ಬೆಂಗಳೂರಿನ ಕುಮಾರಸ್ವಾಮಿ ಅವರ ನಿವಾಸಕ್ಕೆ ಆಗಮಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ; Sumalatha; ಬಿಜೆಪಿ ಟಿಕೆಟ್‌ಗಾಗಿ ಸುಮಲತಾ ಲಾಬಿ ಶುರು; ವರಿಷ್ಠರ ಭೇಟಿಯಲ್ಲಿ ಆಶ್ವಾಸನೆ ಸಿಕ್ತಾ..?
ಭೋಜನಕ್ಕೆ ಅಮಿತ್ ಶಾಗೆ ಆಹ್ವಾನ?
ಕುಮಾರಸ್ವಾಮಿಯವರು ಅಮಿತ್ ಶಾ ಅವರನ್ನು ಭೋಜನಕ್ಕೆ ಆಹ್ವಾನ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ವೇಳೆ ರಾಜ್ಯದ ರಾಜಕೀಯ ಹಾಗೂ ಸೀಟು ಹಂಚಿಕೆ ಕುರಿತಂತೆ ಚರ್ಚೆ ನಡೆಯಲಿದೆ. ಜೊತೆಗೆ ಜೆಡಿಎಸ್ ಹಾಗೂ ಬಿಜೆಪಿ ಸಂಬಂಧ ಸಾಕಷ್ಟು ಗಟ್ಟಿಯಾಗಿದೆ ಅನ್ನೋದು ಈ ಭೇಟಿ ಮೂಲಕ ರಾಜ್ಯದ ಜನತೆಗೆ ಸಂದೇಶ ರವಾನೆಯಾದಂತಾಗುತ್ತದೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯರ್ತರು ಇನ್ನೂ ಒಟ್ಟಿಗೆ ಕಾರ್ಯಕ್ರಮಗಳನ್ನು ಮಾಡುತ್ತಿಲ್ಲ. ಇಬ್ಬರ ನಡುವೆ ಗೊಂದಲಗಳಿವೆ. ಅಮಿತ್ ಶಾ ಅವರ ಈ ಭೇಟಿ ಎಲ್ಲಾ ಗೊಂದಲಗಳನ್ನು ನಿವಾರಣೆ ಮಾಡಬಹುದು ಎಂದು ಹೇಳಲಾಗುತ್ತಿದೆ.
ತ್ತೀಚೆಗೆ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದರು. ಈ ವೇಳೆ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಎನ್ಡಿಎ ಮೈತ್ರಿಕೂಟದ ನೇತೃತ್ವ ವಹಿಸುವಂತೆ ಕುಮಾರಸ್ವಾಮಿ ಅವರಲ್ಲಿ ಅಮಿತ್ ಶಾ ಕೋರಿದ್ದರು ಎನ್ನಲಾಗಿದೆ.
ಇದನ್ನೂ ಓದಿ; Congress VS bjp; ಬಿಜೆಪಿ ಶ್ವೇತ ಪತ್ರ, ಕಾಂಗ್ರೆಸ್ ಕಪ್ಪು ಪತ್ರ; ಏನಿದು ಜಟಾಪಟಿ?
ಅಮಿತ್ ಶಾ ಸಭೆಗಳಿಗೆ ಹೆಚ್‌ಡಿಕೆಗೂ ಆಹ್ವಾನ
ಲೋಕಸಭಾ ಚುನಾವಣೆಗೆ ಬಿಜೆಪಿ ಪಕ್ಷ ಸಿದ್ಧತೆ ನಡೆಸಿದೆ. ಅದರಲ್ಲೂ ರಾಜ್ಯದಲ್ಲಿ ಬಿ,ವೈ,ವಿಜಯೇಂದ್ರ ನೇತೃತ್ವದಲ್ಲಿ ಪಕ್ಷ ಸಂಘಟನೆ ಜೋರಾಗಿ ನಡೆಯುತ್ತಿದೆ. ಪಕ್ಷ ಬಿಟ್ಟವರನ್ನು ವಾಪಸ್ ಕರೆ ತರೋ ಪ್ರಯತ್ನ ಕೂಡಾ ನಡೆಯುತ್ತಿದೆ. ಜೊತೆಗೆ ರಾಜ್ಯದಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ಬಿಜೆಪಿಗೆ ಒಕ್ಕಲಿಗ ಮತಗಳು ಕೂಡಾ ಒಲಿಯುವ ಸಾಧ್ಯತೆ ಇದೆ. ಹೀಗಾಗಿ ಅಮಿತ್ ಶಾ ರಾಜ್ಯದಲ್ಲಿ ಅತಿಹೆಚ್ಚು ಸ್ಥಾಗಳನ್ನು ಗೆಲ್ಲೋದಕ್ಕೆ ರಣತಂತ್ರ ಹೆಣೆಯಲಿದ್ದಾರೆ. ಇದಕ್ಕಾಗಿ ಬೆಂಗಳೂರಿನಲ್ಲಿ ಹಲವು ಸಭೆಗಳನ್ನು ನಡೆಸಲಿದ್ದಾರೆ. ಇದಕ್ಕಾಗಿ ಹೆಚ್.ಡಿ.ಕುಮಾರಸ್ವಾಮಿಯವರಿಗೂ ಆಹ್ವಾನ ಕೊಟ್ಟಿದ್ದಾರೆ.
ಎರಡು ದಿನಗಳ ಕಾಲ ಅಮಿತ್ ಶಾ ರಾಜ್ಯ ಪ್ರವಾಸ
ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಳ್ಳುತ್ತಿರುವ ಅಮಿತ್ ಶಾ ಸರಣಿ ಸಭೆಗಳನ್ನು ನಡೆಸಲಿದ್ದಾರೆ. ಈಗಾಗಲೇ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಸರ್ವೇ ರಿಪೋರ್ಟ್ ರೆಡಿಯಾಗಿದೆ. ಅದರ ಪರಾಮರ್ಶೆ ಮಾಡಿ, ಯಾರನ್ನು ಕಣಕ್ಕಿಳಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಫೆಬ್ರವರಿ 9ರಂದು ಸುತ್ತೂರು ಜಾತ್ರೆಯಲ್ಲಿ ಅಮಿತ್ ಶಾ ಪಾಲ್ಗೊಳ್ಳುತ್ತಾರೆ. ಅನಂತರ ಬೆಂಗಳೂರಿಗೆ ಆಗಮಿಸುವ ಅವರು ಬೆಂಗಳೂರಿನಲ್ಲಿ ಎರಡು ದಿನ ವಾಸ್ತವ್ಯ ಹೂಡಲಿದ್ದಾರೆ. ಫೆಬ್ರವರಿ 10ರಂದು ಬೆಳಿಗ್ಗೆಯಿಂದಲೇ ಖಾಸಗಿ ಹೊಟೇಲ್‌ನಲ್ಲಿ ಬಿಜೆಪಿ ನಾಯಕರ ಜೊತೆ ಮಹತ್ವದ ಸಭೆಗಳನ್ನು ನಡೆಸಲಿದ್ದಾರೆ. ಈ ಸಭೆಯಲ್ಲಿ ಜೆಡಿಎಸ್ ನಾಯಕ ಕುಮಾರಸ್ವಾಮಿ ಕೂಡಾ ಭಾಗವಹಿಸಲಿದ್ದಾರೆ.
ಬೆಂಗಳೂರಿನ ಸಭೆಗಳನ್ನು ಮುಗುಸಿದ ಬಳಿಕ ಅವರು ನೇರವಾಗಿ ದಾವಣಗೆರೆಗೆ ತೆರಳಲಿದ್ದಾರೆ. ಅಲ್ಲಿ ಶಾಮನೂರು ಶಿವಶಂಕರಪ್ಪ ಅತಿಥಿಗೃಹವನ್ನ ಅಮಿತ್ ಶಾ ಲೋಕಾರ್ಪಣೆ ಮಾಡಲಿದ್ದಾರೆ.. ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿಗೆ ಬರುತ್ತಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಮಿತ್ ಶಾ ದಾವಣಗೆರೆ ಬೇಟಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ.
ಇದನ್ನೂ ಓದಿ; White Paper; ಸಂಸತ್ತಿನಲ್ಲಿ ಶ್ವೇತಪತ್ರ ಮಂಡಿಸಿದ ನಿರ್ಮಲಾ ಸೀತಾರಾಮನ್