BengaluruPoliticsUncategorized

ರೌಡಿ ಶೀಟರ್‌ಗಳು ಬಿಜೆಪಿ ಸೇರ್ಪಡೆ ವಿಚಾರ; ಬಿಜೆಪಿ ವಿರುದ್ಧ ಕಾಂಗ್ರೆಸ್‌ ಸರಣಿ ಟ್ವೀಟ್‌

ಬೆಂಗಳೂರು; ಬಿಜೆಪಿ ನಾಯಕರು ರೌಡಿ ಶೀಟರ್‌ಗಳೊಂದಿಗೆ ಕಾಣಿಸಿಕೊಂಡಿರುವುದನ್ನು ಕಾಂಗ್ರೆಸ್‌ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ಈ ಬಗ್ಗೆ ಕಾಂಗ್ರೆಸ್‌ ಸರಣಿ ಟ್ವೀಟ್‌ ಮಾಡಿದೆ. ಸೈಲೆಂಟ್ ಸುನಿಲ್ ಜೊತೆ ಬಿಜೆಪಿ ಸಂಸದರು ಕಾಣಿಸಿಕೊಂಡಿದ್ದು ಹಾಗೂ ಫೈಟರ್ ರವಿ ಬಿಜೆಪಿ ಸೇರ್ಪಡೆ ವಿಚಾರವಾಗಿ ಕಾಂಗ್ರೆಸ್‌ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆದಿದೆ.

ಎಲ್ಲೆಡೆ ಆಕ್ರೋಶಗಳು ವ್ಯಕ್ತವಾಗುತ್ತಿದ್ದಂತೆ ಬಿಜೆಪಿ ಸೈಲೆಂಟ್‌ ಸುನೀಲನನ್ನು ಬಿಜೆಪಿಗೆ ಸೇರಸಿಕೊಳ್ಳಲ್ಲ ಎಂದು ಹೇಳಿದೆ. ಆದ್ರೆ ಫೈಟರ್‌ದ ರವಿಯನ್ನು ಈಗಾಗಲೇ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ. ಈ ಬಗ್ಗೆ ಕಟೀಲ್‌ ಸೈಲೆಂಟಾಗಿರುವುದು ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ.

 

ಈ ಬಗ್ಗೆ ಕಾಂಗ್ರೆಸ್‌ ಮಾಡಿರುವ ಟ್ವೀಟ್‌ಗಳು ಹೀಗಿವೆ..
ಟ್ವೀಟ್‌-೧
ಡ್ಯಾಮೇಜ್ ಕಂಟ್ರೋಲ್‌ಗಾಗಿ ಸೈಲೆಂಟ್ ಸುನಿಲನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಫೈಟರ್ ರವಿ ಪಕ್ಷ ಸೇರಿದ್ದರ ಬಗ್ಗೆ ಸೈಲೆಂಟ್ ಆಗಿರುವುದೇಕೆ?, ಬಿಜೆಪಿಗರೇ, ಫೈಟರ್ ರವಿ ರೌಡಿ ಶೀಟರ್ ಅಲ್ಲವೇ?, ಇಂತಹ ಸದಾರಮೆ ನಾಟಕ ಮಾಡುವುದಕ್ಕಿಂತ ರೌಡಿ ಮೋರ್ಚಾವನ್ನು ಘೋಷಣೆ ಮಾಡಿಬಿಡಿ’ ಎಂದು ಕಾಂಗ್ರೆಸ್‌ ಟೀಕಿಸಿದೆ.

ಟ್ವೀಟ್‌-೨
‘ಒಂದೆಡೆ ಸಿ.ಎನ್‌.ಅಶ್ವತ್‌ನಾರಾಯಣ ಹಾಗೂ ಸಿಎಂ ರೌಡಿಗಳನ್ನು ಸಮರ್ಥಿಸಿ ಮಾತಾಡುತ್ತಾರೆ, ಮತ್ತೊಂದೆಡೆ ಎಲ್ಲೋ ಅಡಗಿದ್ದ ನಳಿನ್‍ಕುಮಾರ್ ಕಟೀಲ್ ಧಿಡೀರ್ ಎದ್ದುಬಂದು ಸೈಲೆಂಟ್ ಸುನಿಲನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎನ್ನುತ್ತಾರೆ. ರೌಡಿ ಮೋರ್ಚಾ ಮಾಡುವ ವಿಚಾರದಲ್ಲೂ ಬಿಜೆಪಿ Vs ಬಿಜೆಪಿ ಕಾದಾಟ ನಡೆಯುತ್ತಿದೆಯೇ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಟ್ವೀಟ್‌-೩
‘ಬಿಜೆಪಿ ಹಾಗೂ ರೌಡಿಗಳ ನಡುವಿನ ಬಾಂಧವ್ಯಕ್ಕೆ ಬಿಬಿಎಂಪಿ ಕಸ ವಿಲೇವಾರಿಯ ಟೆಂಡರ್ ಸಾಕ್ಷಿಯಾಗುತ್ತಿದೆ. ಬೇನಾಮಿ ಹೆಸರಲ್ಲಿ ಸೈಲೆಂಟ್ ಸುನೀಲನಿಗೆ ಕಸದ ಟೆಂಡರ್ ಕೊಡಿಸಿದ ಸಚಿವ ಯಾರು?, ಆ ಸಚಿವರಿಗೂ ಸುನೀಲನಿಗೂ ಯಾವ ಜನ್ಮದ ಮೈತ್ರಿ? ಅರ್ಹತೆ ಇಲ್ಲದಿದ್ದರೂ ನಿಯಮ ಮೀರಿ ಟೆಂಡರ್ ಕೊಟ್ಟಿದ್ದು ಹೇಗೆ? ಏಕೆ?’ ಎಂದು ಕಾಂಗ್ರೆಸ್ ಗುಡುಗಿದೆ.

 

Share Post