NationalUncategorized

ಇಂದು ಸಂವಿಧಾನ ದಿನ; ಸಂಸತ್ತಿನಲ್ಲಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಸಂವಿಧಾನ ರಚನಾ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ದೇಶದಲ್ಲಿಂದು ಸಂವಿಧಾನ ದಿನಾಚರಣೆ ಮಾಡಲಾಗುತ್ತಿದೆ.   ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು  ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇನ್ನು ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ಪ್ರತಿಭಟನೆ ಶುರು ಮಾಡಿ ಇಂದಿಗೆ ಒಂದು ವರ್ಷವಾಗಲಿದೆ. ಕೆಲ ದಿನದ ಹಿಂದೆಯಷ್ಟೇ ಕೃಷಿ ಕಾಯ್ದೆ ಹಿಂಪಡೆಯುವ ತೀರ್ಮಾನ ಪ್ರಕಟಿಸಿದ್ದ ಮೋದಿ, ಇಂದು ಈ ಬಗ್ಗೆ ಮಾತನಾಡುವ ಸಾಧ್ಯತೆ ಇದೆ.

  ಸಂವಿಧಾನ ಅಂಗೀಕಾರವಾದ ದಿನವನ್ನು ಐತಿಹಾಸಿಕ ಮಹತ್ವ ನೀಡಲು ೨೦೧೫ರಿಂದ ಸಂವಿಧಾನ ದಿನಾಚರಣೆ ಮಾಡಲಾಗುತ್ತಿದೆ. ಸಂವಿಧಾನ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತು ಮತ್ತು ವಿಜ್ಞಾನ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.  ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪರಾಷ್ಟ್ರಪತಿ‌ ವೆಂಕಯ್ಯನಾಯ್ಡು, ಪ್ರಧಾನಿ ಮೋದಿ ಮತ್ತು ಲೋಕಸಭಾ ಸ್ಪೀಕರ್ ಭಾಗವಹಿಸಲಿದ್ದಾರೆ.
 ಇನ್ನು ಈ ಕಾರ್ಯಕ್ರಮದಲ್ಲಿ ಸಂವಿಧಾನ ರಚನಾ ಸಭೆಯ ಚರ್ಚೆಗಳ ಡಿಜಿಟಲ್ ಆವೃತ್ತಿ, ಭಾರತದ ಸಂವಿಧಾನದ ಕ್ಯಾಲಿಗ್ರಾಫ್ ಪ್ರತಿಯ ಡಿಜಿಟಲ್ ಆವೃತ್ತಿ ಮತ್ತು ಇಲ್ಲಿಯವರೆಗಿನ ಎಲ್ಲಾ ತಿದ್ದುಪಡಿಗಳನ್ನು ಒಳಗೊಂಡಿರುವ ಭಾರತದ ಸಂವಿಧಾನದ ನವೀಕರಿಸಿದ ಆವೃತ್ತಿಯನ್ನು ರಾಷ್ಟ್ರಪತಿಯವರು ಬಿಡುಗಡೆ ಮಾಡಲಿದ್ದಾರೆ. ಅಲ್ಲದೆ ಸಾಂವಿಧಾನಿಕ ಪ್ರಜಾಪ್ರಭುತ್ವ ಕುರಿತ ಆನ್ಲೈನ್ ರಸಪ್ರಶ್ನೆ ಕಾರ್ಯಕ್ರಮವನ್ನು ಕೂಡಾ ರಾಷ್ಟ್ರಪತಿಗಳು ಉದ್ಘಾಟಿಸಲಿದ್ದಾರೆ.
Share Post