ಗುಜರಾತ್‌ನಲ್ಲಿ ಮತ್ತೆ ಬಿಜೆಪಿಗೆ ಪ್ರಚಂಡ ಬಹುಮತ; ಸಮೀಕ್ಷೆಗಳು ಏನು ಹೇಳ್ತವೆ..?
ಗುಜರಾತ್; ಗುಜರಾತ್ ವಿಧಾನಸಭಾ ಚುನಾವಣೆ ಮುಕ್ತಾಯವಾಗಿದೆ. ಫಲಿತಾಂಶವೊಂದೇ ಬಾಕಿ ಇದೆ. ಆದ್ರೆ ಸತತ ನಾಲ್ಕನೇ ಬಾರಿಯೂ ಗುಜರಾತ್‌ನಲ್ಲಿ ಕಮಲ ಅರಳಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳುತ್ತಿವೆ. ಗುಜರಾತ್‌ನಲ್ಲಿ ಬಿಜೆಪಿ ಈ ಬಾರಿಯೂ ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಗಳಿಂದ ತಿಳಿದುಬಂದಿದೆ.
182 ಕ್ಷೇತ್ರಗಳ ಗುಜರಾತ್ ವಿಧಾನಸಭೆಯಲ್ಲಿ ಬಿಜೆಪಿ 117 ರಿಂದ 140 ಸ್ಥಾನಗಳು ಗೆಲ್ಲಬಹುದು ಎಂದು ಅಂದಾಜಿಸಲಾಗಿದೆ. ಕಾಂಗ್ರೆಸ್ ಪಕ್ಷ 34 ರಿಂದ 51 ಸ್ಥಾನ ಗೆಲ್ಲಬಹುದು ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ. ಆಮ್ ಆದ್ಮಿ ಪಾರ್ಟಿ 6 ರಿಂದ 13 ಸ್ಥಾನಗಳನ್ನು ಗೆಲ್ಲಲಿದ್ದು, ಇತರರು ಒಂದೆರಡು ಸೀಟು ಗೆಲ್ಲಬಹುದು ಎಂದು ಸಮೀಕ್ಷೆಗಳು ಹೇಳುತ್ತಿವೆ.