NationalUncategorized

JARAKIHOLI CD CASE; ಎಸ್‌ಐಟಿ ವರದಿಗೆ ತಡೆ ನೀಡಿದ ಸುಪ್ರೀಂ ಕೋರ್ಟ್‌

ಬೆಂಗಳೂರು: ಮುಂದಿನ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ನಾನಾ ಪ್ರಯತ್ನ ನಡೆಸುತ್ತಿದ್ದ ರಮೇಶ್‌ ಜಾರಕಿಹೊಳಿಗೆ ಸಿಡಿ ಪ್ರಕರಣ ಮತ್ತೆ ಕಂಟಕ ತಂದೊಡ್ಡಿದೆ. ಎಸ್‌ಐಟಿ ವರದಿಗೆ ತಡೆ ಕೋರಿ ಸಂತ್ರಸ್ತ ಯುವತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಮಾನ್ಯ ಮಾಡಿದೆ. ಅಧೀನ ನ್ಯಾಯಾಲಯದಲ್ಲಿ ಎಸ್‌ಐಟಿ ಸಲ್ಲಿಸಿದ್ದ ತನಿಖಾ ವರದಿಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸರ್ಕಾರ ವಿಶೇಷ ತನಿಖಾ ತಂಡ ರಚನೆ ಮಾಡಿತ್ತು. ಆದ್ರೆ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ ಸರಿ ಇಲ್ಲ. ತನಿಖಾ ತಂಡದ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ತನಿಖೆ ಮಾಡಿ ವರದಿ ತಯಾರಿಸಲಾಗಿದೆ. ಹೀಗಾಗಿ ವರದಿ ಸಲ್ಲಿಸಲು ಅವಕಾಶ ನೀಡಬಾರದೆಂದು ಯುವತಿ ವಾದಿಸಿದ್ದರು. ಆದ್ರೆ ಹೈಕೋರ್ಟ್‌ ಅಧೀನ ನ್ಯಾಯಾಲಯದಲ್ಲಿ ವರದಿ ಸಲ್ಲಿಸಲು ಎಸ್‌ಐಟಿಗೆ ಅನುಮತಿ ನೀಡಿತ್ತು. ಪ್ರಕರಣದಲ್ಲಿ ರಮೇಶ್‌ ಜಾರಕಿಹೊಳಿ ತಪ್ಪಿಲ್ಲವೆಂದು ಎಸ್‌ಐಟಿ, ಅಧೀನ ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಸಿತ್ತು.

ಇದನ್ನು ಪ್ರಶ್ನಿಸಿ ಸಂತ್ರಸ್ತ ಯುವತಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಯುವತಿ ಮನವಿಯನ್ನು ಮನ್ನಿಸಿರುವ ಸುಪ್ರೀಂ ಕೋರ್ಟ್‌, ಎಸ್‌ಐಟಿ ವರದಿಗೆ ತಡೆ ನೀಡಿದೆ.

 

Share Post