Uncategorized

ಕನಕಪುರದಲ್ಲಿ ನಾಮಪತ್ರ ಸಲ್ಲಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌; ಭಾರಿ ಮೆರವಣಿಗೆ

ರಾಮನಗರ; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಇಂದು ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮೊದಲು ಅವರು ಕನಕಪುರ ಪಟ್ಟಣದಲ್ಲಿ ಭಾರಿ ಮೆರವಣಿಗೆ ಮಾಡಿದರು.

ಡಿ.ಕೆ.ಶಿವಕುಮಾರ್‌ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಬೃಹತ್‌ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಸಾವಿರಾರು ಜನರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಎಲ್ಲಿ ನೋಡಿದರೂ ಕಾಂಗ್ರೆಸ್‌ ಬಾವುಟಗಳೇ ರಾರಾಜಿಸುತ್ತಿದ್ದವು. ಡಿ.ಕೆ.ಶಿವಕುಮಾರ್‌ ಅವರಿಗೆ ಅಭಿಮಾನಿಗಳು ಬೃಹತ್‌ ಮೂಸಂಬಿ ಹಾರ ಜೈಕಾರ ಕೂಗಿದರು.

Share Post