BengaluruPoliticsUncategorized

ನಾಳೆ ರಾಜ್ಯಕ್ಕೆ ಮತ್ತೆ ಪ್ರಧಾನಿ ಮೋದಿ ಆಗಮನ

ಬೆಂಗಳೂರು; ರಾಜ್ಯ ವಿಧಾನ ಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಪ್ರಧಾನಿ ಮೋದಿ ಕರ್ನಾಟಕ ರೌಂಡ್ಸ್ ಮುಂದುರಿದಿದೆ, ಕಳೆದ ವಾರವಷ್ಟೇ ಹುಬ್ಬಳ್ಳಿಯಲ್ಲಿ ನಡೆದ ಯುವಜನೋತ್ಸವಕ್ಕೆ ಆಗಮಸಿದ್ದ ಪ್ರಧಾನಿ ಮೋದಿ ನಾಳೆ ಯಾದಗಿರಿ, ಕಲ್ಬುರ್ಗಿಗೆ ಆಗಮಿಸಲಿದ್ದಾರೆ.
ಜ.19 ರಂದು ಕಲ್ಪುರ್ಗಿ , ಯಾದಗಿರಿಯಲ್ಲಿ ನಡೆಯಲಿರುವ ಸರ್ಕಾರಿ ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ. ಕಲ್ಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮೊಳಕೇರಾ ಗ್ರಾಮದಲ್ಲಿ ನಡೆಯಲಿರುವ ಲಂಬಾಣಿ ತಾಂಡ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಿದ್ದಾರೆ.
ಲಂಬಾಣಿ ತಾಂಡಗಳನ್ನ ಸರ್ಕಾರ ಕಂದಾಯ ಗ್ರಾಮವಾಗಿ ಘೋಷಣೆ ಮಾಡಿದ್ದು ಪ್ರಧಾನಿ ಮೋದಿ 51 ಸಾವಿರ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಿದ್ದಾರೆ. ಬಳಿಕ ಯಾದಗಿರಿ ಜಿಲ್ಲೆ ಹುಣಸಗಿ ತಾಲ್ಲೂಕಿನ ಕೊಡೇಕಲ್ ಬಳಿ ಇರುವ ಬಸವಸಾಗರ ಡ್ಯಾಂ ಗೆ ಅಳವಡಿಸಿರುವ ಸ್ವಯಂ ಚಾಲಿತ ಗೇಟ್ ಗಳಿಗೆ ಚಾಲನೆ ನೀಡಲಿದ್ದಾರೆ. ಅಲ್ಲದೆ ವಿವಿದ ಅಭಿವೃದ್ದಿ ಕಾರ್ಯಕ್ರಮಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.
ದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಲಇರುವ ಪ್ರಧಾನಿ ಮೋದಿ ಬೆಳಗ್ಗೆ 11.30 ಕ್ಕೆ ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಕಾರಿನ ಮೂಲಕ ಕೊಡೇಕಲ್ ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.ಮದ್ಯಾಹ್ನ 2 ಗಂಟೆ ಮೊಳಕೇರಾ ಗ್ರಾಮದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರದಲ್ಲಿ ಭಾಗವಹಿಸಲಿದ್ದಾರೆ.

Share Post