BengaluruUncategorized

ನಾನು ತಪ್ಪು ಮಾಡಿಲ್ಲ, ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕೇಸ್‌ ; ರವಿ ಡಿ.ಚೆನ್ನಣ್ಣನವರ್‌

ಬೆಂಗಳೂರು: ಐಪಿಎಸ್‌ ಅಧಿಕಾರಿ ರವಿ ಡಿ.ಚೆನ್ನಣ್ಣನವರ್‌ ವಿರುದ್ಧ ಕೇಳಿಬಂದಿರುವ ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ರವಿ ಚೆನ್ನಣ್ಣನವರ್‌ ಕೊನೆಗೂ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ರವಿ ಡಿ.ಚೆನ್ನಣ್ಣ ನವರ್‌, ನನ್ನ ವಿರುದ್ಧ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಆರೋಪ ಮಾಡುತ್ತಿದ್ದಾರೆ. ಅಕ್ರಮವಾಗಿ ಆಸ್ತಿ ಮಾಡಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಅದೆಲ್ಲಾ ಶುದ್ಧ ಸುಳ್ಳು. ಇಂತಹ ಸುದ್ದಿಗಳನ್ನು ನಂಬಬೇಡಿ ಎಂದು ರವಿ ಡಿ. ಚೆನ್ನಣ್ಣನವರ್‌ ಸಾರ್ವಜನಿಕರಿಗೆ ಮನವಿ ಮಾಡಿದಾರೆ.

ನನಗೆ ಪಿತ್ರಾರ್ಜಿತ ಹಾಗೂ ಸ್ವಯಾರ್ಜಿತ ಆಸ್ತಿಗಳಿವೆ. ಅವುಗಳೆಲ್ಲವನ್ನೂ ಕಾನೂನು ಪ್ರಕಾರವೇ ಪಡೆದಿದ್ದೇನೆ. ನಾನು ಖರೀದಿ ಮಾಡಿರುವ ಆಸ್ತಿಗಳ ಬಗ್ಗೆ ಆಯಾ ವರ್ಷದಲ್ಲೇ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದೇನೆ. ನನ್ನ ವಿರುದ್ಧ ಮಾಡುತ್ತಿರುವ ಆರೋಪಗಳೆಲ್ಲಾ ಸುಳ್ಳು ಎಂದು ರವಿ ಡಿ.ಚೆನ್ನಣ್ಣನವರ್‌ ಹೇಳಿದ್ದಾರೆ.

ಈಗಾಗಲೇ ಸಾಮಾಜಿಕ ಜಾಲಾತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದವರಿಗೆ ಲೀಗಲ್‌ ನೋಟಿಸ್‌ ನೀಡಲಾಗಿದೆ. ಅವರು ಅದಕ್ಕೆ ಇನ್ನೂ ಉತ್ತರ ಕೊಟ್ಟಿಲ್ಲ. ಹೀಗಾಗಿ ಅವರ ವಿರುದ್ಧ ಮೂರು ಕೋಟಿ ರೂಪಾಯಿ೯ ಮಾನನಷ್ಟ ಮೊಕದ್ದಮೆ ಹೂಡಲಾಗುತ್ತದೆ. ಜೊತೆಗೆ ಸುಳ್ಳು ಸುದ್ದಿ ಹಬ್ಬಿಸುವವರಿಗೆ ಜೈಲು ಶಿಕ್ಷೆ ವಿಧಿಸುವಂತೆ ಕೋರ್ಟ್‌ಗೆ ಮನವಿ ಮಾಡಲಾಗುತ್ತದೆ ಎಂದು ಐಪಿಎಸ್‌ ಅಧಿಕಾರಿ ರವಿ ಡಿ.ಚೆನ್ನಣ್ಣನವರ್‌ ಹೇಳಿದ್ದಾರೆ.

Share Post