ಸಿದ್ದರಾಮಯ್ಯಗೆ 2 ವರ್ಷ, ಡಿ.ಕೆ.ಶಿವಕುಮಾರ್‌ಗೆ 3 ವರ್ಷ ಪಟ್ಟ..?
ಬೆಂಗಳೂರು; ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಮೊದಲಿಗೆ ಸಿದ್ದರಾಮಯ್ಯ ಸಿಎಂ ಆಗಲಿದ್ದು, ಅವರು 2 ವರ್ಷ ಸಿಎಂ ಆಗಿರಲಿದ್ದಾರೆ. ಸಿದ್ದರಾಮಯ್ಯ ಸಂಪುಟದಲ್ಲಿ ಡಿ.ಕೆ.ಶಿವಕುಮಾರ್ ಅವರು ಡಿಸಿಎಂ ಹಾಗೂ ಎರಡು ಪ್ರಮುಖ ಖಾತೆಗಳನ್ನು ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ನಂತರದ ಮೂರು ವರ್ಷಗಳ ಕಾಲ ಡಿ.ಕೆ.ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಒಂದು ವರ್ಷದಲ್ಲಿ ಲೋಕಸಭಾ ಚುನಾವಣೆ ಇದೆ. ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯತೆ ಹೊಂದಿದ್ದಾರೆ. ಹೀಗಾಗಿ ಅವರೇ ಸಿಎಂ ಆದರೆ ಒಳ್ಳೆಯದು ಹೈಕಮಾಂಡ್ ಭಾವಿಸಿದಂತೆ ಕಾಣುತ್ತಿದೆ. ಲೋಕಸಭಾ ಚುನಾವಣೆ ಬಳಿ ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ಸಿಗುತ್ತದೆ ಎಂದು ಹೇಳಲಾಗುತ್ತಿದೆ.