NationalUncategorized

ಸ್ಪೈಸ್‌ ಜೆಟ್‌ ವಿಮಾನದಲ್ಲಿ ಹೊಗೆ; ಕೆಲಕಾಲ ಆತಂಕ

ನವದೆಹಲಿ; ಜಬಲ್‌ಪುರಕ್ಕೆ ಹೊರಟಿದ್ದ ಸ್ಪೈಸ್‌ ಜೆಟ್‌ ವಿಮಾನದ ಕ್ಯಾಬಿನ್‌ನಲ್ಲಿ ಹೊಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯಿಂದ ಪ್ರಯಾಣಿಕರನ್ನು ಹೊತ್ತ ವಿಮಾನ ಜಬಲ್‌ ಪುರಕ್ಕೆ ತೆರಳುತ್ತಿತ್ತು. ಈ ವೇಳೆ ಹೊಗೆ ಕಾಣಿಸಿಕೊಂಡಿದ್ದರಿಂದ ಕೂಡಲೇ ವಾಪಸ್‌ ಬಂದು ದೆಹಲಿಯ ವಿಮಾನ ನಿಲ್ದಾಣದಲ್ಲಿ ಸೇಫಾಗಿ ಲ್ಯಾಂಡ್‌ ಮಾಡಲಾಗಿದೆ. 

ವಿಮಾನ 5,000 ಅಡಿ ಎತ್ತರದಲ್ಲಿ ಹಾರಾಡುತ್ತಿದ್ದ ವೇಳೆ ಕ್ಯಾಬಿನ್ ಒಳಗೆ ಹೊಗೆ ಬರುತ್ತಿರುವುದನ್ನು ಸಿಬ್ಬಂದಿ ಗಮನಿಸಿದ್ದಾರೆ. ಪ್ರಯಾಣಿಕರೆಲ್ಲಾ ಸುರಕ್ಷಿತವಾಗಿದ್ದು, ಎಲ್ಲರನ್ನೂ ಬೇರೊಂದು ವಿಮಾನದಲ್ಲಿ ಪ್ರಯಾಣಿಸಲು ವ್ಯವಸ್ಥೆ ಮಾಡಲಾಯಿತು. ವಿಮಾನದಲ್ಲಿ ಲೋಪ ಕಂಡುಬರಲು ಕಾರಣ ಏನು ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.

Share Post