DistrictsUncategorized

ಮೈಸೂರಿನಲ್ಲಿ ಟಿಪ್ಪು ಮೂರ್ತಿ ಸ್ಥಾಪನೆ ವಿಚಾರ; ಜೋರಾಯ್ತು ವಿವಾದ

ಮೈಸೂರು; ಮೈಸೂರು ಅಥವಾ ಶ್ರೀರಂಗಪಟ್ಟಣದಲ್ಲಿ 100 ಅಡಿ ಎತ್ತರದ ಟಿಪ್ಪು ಸುಲ್ತಾನ್ ಸ್ಥಾಪಿಸಿಯೇ ತೀರುತ್ತೇವೆ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಪುನರುಚ್ಚರಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವ್ರು, ಮೈಸೂರು ಅಥವಾ ಶ್ರೀರಂಗಪಟ್ಟಣದಲ್ಲಿ ಟಿಪ್ಪುವಿನ ಕಂಚು ಅಥವಾ ಪಂಚಲೋಹದ ಪ್ರತಿಮೆ ಸ್ಥಾಪನೆ ಮಾಡುತ್ತೇವೆ. ಈ ಬಗ್ಗೆ ಸದ್ಯದಲ್ಲೇ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಇದಕ್ಕೆ ಪ್ರಮೋದ ಮುತಾಲಿಕ್ ಪ್ರತಿಕ್ರಿಯಿಸಿದ್ದು, ಟಿಪ್ಪುಮೂರ್ತಿ ಸ್ಥಾಪನೆ ಮಾಡಿದರೆ ನಾವು ಧ್ವಂಸ ಮಾಡುತ್ತೇವೆ. ಮುಸ್ಲಿಂ ಧರ್ಮದಲ್ಲಿ ಮೂರ್ತಿ ಸ್ಥಾಪನೆಗೆ ಅವಕಾಶವಿಲ್ಲ. ಹೀಗಾಗಿ ಮುಸ್ಲಿಮರೇ ವಿರೋಧಿಸುತ್ತಾರೆ ಎಂದರು.

 

Share Post