Uncategorized

ಗನ್‌ ಪಾಯಿಂಟ್‌ನಲ್ಲಿ ಮಹಿಳಾ ಕಾನ್ಸ್‌ಟೇಬಲ್‌ ಮೇಲೆ ಅತ್ಯಾಚಾರ; ಎಸ್‌ಐ ಅರೆಸ್ಟ್‌!

ಹೈದರಾಬಾದ್‌; ಗನ್‌ ತೋರಿಸಿ ಬೆದರಿಸಿ ಮಹಿಳಾ ಪೊಲೀಸ್‌ ಕಾನ್ಸ್‌ಟೇಬಲ್‌ ಮೇಲೆ ಠಾನೆಯ ಸಬ್‌ ಇನ್ಸ್‌ಪೆಕ್ಟರ್‌ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.. ಪೊಲೀಸ್‌ ಠಾಣೆಯಲ್ಲೇ ಅತ್ಯಾಚಾರ ಎಸಗಲಾಗಿದ್ದು, ಆರೋಪಿಗಳಿಬ್ಬರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.. ತೆಲಂಗಾಣದ ಭೂಪಾಲಪಲ್ಲಿ ಜಿಲ್ಲೆಯ ಕಾಳೇಶ್ವರಂ ಪೊಲೀಸ್ ಠಾಣೆಯಲ್ಲಿ ಈ ದೃಷ್ಕೃತ್ಯ ನಡೆದಿದೆ..

ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ಭವಾನಿ ಸೇನ್‌ ಎಂಬಾತ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.. ಈತನ ಜೊತೆಗೆ ಜಯಶಂಕರ್‌ ಎಂಬಾತನ ವಿರುದ್ಧವೂ ಆರೋಪ ಕೇಳಿಬಂದಿದೆ.. ಇಬ್ಬರನ್ನೂ ಕೆಲಸದಿಂದ ಅಮಾನತು ಮಾಡಲಾಗಿದ್ದು, ಬಂಧಿಸಿ ಜೈಲಿಗಟ್ಟಲಾಗಿದೆ..

ಮಹಿಳಾ ಕಾನ್ಸ್‌ಟೇಬಲ್‌ ಒಬ್ಬರು ದೂರು ನೀಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.. ಆರೋಪಿ ತನ್ನ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ತನ್ನದೇ ಠಾಣೆಯ ಮಹಿಲಾ ಕಾನ್ಸ್‌ಟೇಬಲ್‌ಗಳಿಗೆ ಗನ್‌ ತೋರಿಸಿ ದೈಹಿಕವಾಗಿ ಬಳಸಿಕೊಳ್ಳುತ್ತಿದ್ದ ಎಂದು ಆರೋಪಿಸಲಾಗಿದೆ.. ಈ ಹಿಂದೆ ಕೂಡಾ ಮೂವರು ಮಹಿಳಾ ಕಾನ್ಸ್‌ಟೇಬಲ್‌ಗಳ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.. ಪೊಲೀಸರು ಈ ಬಗ್ಗೆ ತನಿಖೆ ತೀವ್ರಗೊಳಿಸಿದ್ದಾರೆ..

 

Share Post